ಭಟ್ಕಳ: ತಾಲೂಕಿನ ಮುಟ್ಟಳ್ಳಿ ರೈಲ್ವೆ ನಿಲ್ದಾಣ ಕ್ರಾಸ್ ಸಮೀಪ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಹಾಗೂ ಭಟ್ಕಳ ನಗರ ಠಾಣೆಯ ಪೊಲೀಸರಿಂದ ಕಾರ್ಯಾಚರಣೆ ನಡೆಸಿ ಬಂಧಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿಗಳು.
ಭಟ್ಕಳ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ - bhatkala latest news
ಗಾಂಜಾ ಮಾರಾಟ ಮಾಡುತ್ತಿದ್ದ ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ್ ಎಂಬಾತರನ್ನು ಸಿಇಎನ್ ಹಾಗೂ ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳ ಗಾಂಜಾ ಮಾರಾಟ ಪ್ರಕರಣ
ಆರೋಪಿಗಳು ಮಂಗಳವಾರ ರಾತ್ರಿ ಭಟ್ಕಳ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಮಾರು 560 ಗ್ರಾಂ ತೂಕದ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ವೇಳೆ, ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ. ಜೊತೆಗೆ ಆರೋಪಿಗಳಿಂದ ಒಟ್ಟು 560 ಗ್ರಾಂ ಗಾಂಜಾ ವಶಪಡಿಸಿಕೊಂದಿದ್ದಾರೆ. ಈ ಕುರಿತು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹುಬ್ಬಳ್ಳಿ: ಖಾಸಗಿ ಗೂಡ್ಸ್ ಕಚೇರಿಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ