ಕಾರವಾರ:ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕಾರವಾರ ಮೆಡಿಕಲ್ ಕಾಲೇಜಿನ ಕೋವಿಡ್-19 ವಾರ್ಡ್ ನಲ್ಲಿ ನಡೆದಿದೆ.
ದಾಸನಕೊಪ್ಪ ಮೂಲದ 76 ವರ್ಷದ ವೃದ್ಧ ನ್ಯುಮೋನಿಯಾದಿಂದ ಬಳಲುತ್ತಿದ್ದು, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಯಿಂದ ಕ್ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.