ಶಿರಸಿ:ಸಿದ್ದಾಪುರ ತಾಲೂಕಿನ ಕಾನಸೂರಿನ ಪೋಟೋ ಸ್ಟುಡಿಯೋದಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಅಪರಾಧಿಗಳಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಸಿದ್ದಾಪುರ ಜೆ.ಎಮ್.ಎಫ್.ಸಿ. ನ್ಯಾಯಾಲಯ ಆದೇಶ ಹೊರಡಿಸಿದೆ.
ಕಳ್ಳತನ ಪ್ರಕರಣದ ಅಪರಾಧಿಗಳಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ - ಕಳ್ಳತನಕ್ಕೆ ಸಂಬಂಧಿಸಿ ಇಬ್ಬರಿಗೆ 4ವರ್ಷ ಕಠಿಣ ಕಾರಗೃಹ ಶಿಕ್ಷೆ
ಶಿರಸಿಯ ಗ್ರಾಮವೊಂದರ ಫೋಟೋ ಸ್ಟುಡಿಯೋದಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧಿಸಿ ಇಬ್ಬರು ಅಪರಾಧಿಗಳಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಸಿದ್ದಾಪುರ ಜೆ.ಎಮ್.ಎಫ್.ಸಿ. ನ್ಯಾಯಾಲಯ ಆದೇಶ ಹೊರಡಿಸಿದೆ.

2017ರಲ್ಲಿ ಸಿದ್ದಾಪುರ ತಾಲೂಕಿನ ಕಾನಸೂರಿನ ರಾಜು ಎಂಬವರ ಕಾಳಿಕಾಂಬ ಸ್ಟುಡಿಯೋದಲ್ಲಿ ಕಳ್ಳತನ ನಡೆದಿತ್ತು. ಆ ವೇಳೆ ಒಬ್ಬ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಇನ್ನೊಬ್ಬ ಆರೋಪಿಯನ್ನು ಪೊಲೀಸರು ವಿಶೇಷ ತನಿಖಾ ತಂಡ ರಚಿಸಿ ಅರೆಸ್ಟ್ ಮಾಡಲಾಗಿತ್ತು.
ಅಪರಾಧಿಗಳಾದ ನಗರದ ನವೀನ ರಾಮಚಂದ್ರ ಚೌವ್ಹಾಣ ಹಾಗೂ ವಿನಾಯಕ ಕಾಲೋನಿಯ ನಿತೀಶ್ ದೇವಾಡಿಗ ಎಂಬವರಿಗೆ ಕಾರಾಗೃಹ ಶಿಕ್ಷೆಯ ಜೊತೆಗೆ 5 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜೆ.ಎಮ್.ಎಫ್.ಸಿ. ನ್ಯಾಯಾಲಯ ಆದೇಶ ನೀಡಿದೆ. ಸುಮಾರು 18ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿರುವ ಸರ್ಕಾರಿ ಅಭಿಯೋಜಕ ಚಂದ್ರಶೇಖರ ಎಚ್.ಎಸ್. ವಾದ ಮಂಡಿಸಿದ್ದರು.