ಕಾರವಾರ:13 ವರ್ಷದ ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ವ್ಯಕ್ತಿಗೆ ಕಾರವಾರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್ಟಿಎಸ್ಸಿ ಒಂದನೇ ವಿಭಾಗದ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗು 30 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಕುಮಟಾ ತಾಲೂಕಿನ ಹೊಳೆಗದ್ದೆ ಗ್ರಾಮದ ಮುಕ್ರಿಕೇರಿ ನಿವಾಸಿ ಜಯಂತ ಮುಕ್ರಿ (20) ಎಂಬಾತ ಬಾಲಕಿಯನ್ನು ಬೆತ್ತಗೇರಿ ರಾಮನಗಿಂಡಿ ಬೆಟ್ಟಕ್ಕೆ ಅಪಹರಿಸಿಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಆ ಬಳಿಕ ಮದುವೆಯಾಗುವುದಾಗಿ ನಂಬಿಸಿ ಮತ್ತೆ 2 ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಈ ಕುರಿತು 2020ರ ಜುಲೈನಲ್ಲಿ ಕುಮಟಾ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಪಿಐ ಪರಮೇಶ್ವರ್ ಗುನಗಾ ತನಿಖೆ ನಡೆಸಿ, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗು 30 ಸಾವಿರ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ದಂಡದ ಮೊತ್ತವನ್ನು ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶ ಶಿವಾಜಿ ನಲವಡೆ ತೀರ್ಪಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸೂಕ್ತ ಬೆಡ್ ವ್ಯವಸ್ಥೆ ಇದೆಯೇ?