ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 26 ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ. ಜೊತೆಗೆ 72 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಾರವಾರದ 6 ಮಂದಿಗೆ, ಯಲ್ಲಾಪುರ, ಮುಂಡಗೋಡದ ತಲಾ 5, ಅಂಕೋಲಾ, ಭಟ್ಕಳದ ತಲಾ 4, ಹಳಿಯಾಳ ಮತ್ತು ಸಿದ್ದಾಪುರದ ತಲಾ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ.
ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಹಳಿಯಾಳದ 43 ಮಂದಿ, ಶಿರಸಿಯ 16, ಕಾರವಾರದ 9, ಅಂಕೋಲಾ, ಹೊನ್ನಾವರ, ಭಟ್ಕಳ ಹಾಗೂ ಯಲ್ಲಾಪುರದಲ್ಲಿ ತಲಾ ಓರ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾಗಿರುವ 2,196 ಸೋಂಕಿತರಲ್ಲಿ 1,490 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸದ್ಯ 682 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 90 ಮಂದಿ ಹೋಂ ಐಸೋಲೇಶನ್‌ನಲ್ಲಿದ್ದಾರೆ. ಒಟ್ಟು 24 ಮಂದಿ ಸಾವನ್ನಪ್ಪಿದ್ದಾರೆ.