ಕರ್ನಾಟಕ

karnataka

ETV Bharat / state

ಉತ್ತರಕನ್ನಡ : ದ್ವಿತೀಯ ಪಿಯುಸಿಯಲ್ಲಿ ಫೇಲ್​ ಆದ ವಿದ್ಯಾರ್ಥಿ ಆತ್ಮಹತ್ಯೆ - ಕುಮಟಾ ದ್ಪಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ದ್ವಿತೀಯ ಪಿಯುಸಿಯಲ್ಲಿ ಫೇಲ್​ ಆದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ..

2nd-pu-student-committed-suicide-in-kumta
ಉತ್ತರಕನ್ನಡ: ದ್ವಿತೀಯ ಪಿಯುಸಿಯಲ್ಲಿ ಫೇಲ್​ ಆದ ವಿದ್ಯಾರ್ಥಿ ಆತ್ಮಹತ್ಯೆ

By

Published : Jun 18, 2022, 7:45 PM IST

ಕಾರವಾರ (ಉತ್ತರಕನ್ನಡ) :ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾ ತಾಲೂಕಿನ‌ ಕಡ್ಲೆ ಗ್ರಾಮದಲ್ಲಿ ನಡೆದಿದೆ.

ಕಡ್ಲೆ ಗ್ರಾಮದ ವಿದ್ಯಾರ್ಥಿ ಕುಮಟಾದ ಎ.ವಿ ಬಾಳಿಗಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಈತ 4 ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದ. ಇದರಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಕುಮಟಾ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾರು-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ABOUT THE AUTHOR

...view details