ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಆಗಮಿಸುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ಮನವಿ ಮಾಡಿದ್ದಾರೆ.
ಭಾರೀ ಮಳೆ ಹಿನ್ನೆಲೆ ಉತ್ತರ ಕನ್ನಡದಲ್ಲಿ ಪ್ರವಾಸಕ್ಕೆ 3 ದಿನ ನಿಷೇಧ
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗ್ರಾಮಗಳು ಜಲಾವೃತವಾಗಿದ್ದು, ಗುಡ್ಡ ಕುಸಿತ, ಮರಗಳು ಉರುಳಿ ಬಿದ್ದು ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಆದ್ದರಿಂದ 3 ದಿನಗಳ ಕಾಲ ಜಿಲ್ಲೆಗೆ ಯಾರು ಕೂಡ ಪ್ರವಾಸಕ್ಕೆ ಬರಬಾರದು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡಕ್ಕೆ 3 ದಿನ ಪ್ರವಾಸ ನಿಷೇಧ: ಜಿಲ್ಲಾಧಿಕಾರಿ ಆದೇಶ
ಮಳೆಗೆ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡಿನಲ್ಲಿ ಹಾನಿಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಆದ್ದರಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ತಮ್ಮ ಪ್ರವಾಸ ಮುಂದೂಡುವಂತೆ ತಿಳಿಸಿದ್ದಾರೆ.
ಈಗಾಗಲೇ ಜಿಲ್ಲೆ ಪ್ರವೇಶಿಸುವ ಎಲ್ಲಾ ರಸ್ತೆಗಳಲ್ಲಿ ಪ್ರವಾಹ, ಗುಡ್ಡ ಕುಸಿತ ಹಾಗೂ ಮರಗಳು ಉರುಳಿ ಬೀಳುವುದು ಸೇರಿದಂತೆ ಅಪಾಯಗಳು ಹೆಚ್ಚಾಗುತ್ತಿವೆ. ಈ ಕಾರಣದಿಂದ ಪ್ರಯಾಣ ಮಾಡಿ ಸಂಕಷ್ಟಕ್ಕೆ ಗುರಿಯಾಗಬಾರದು ಹಾಗೂ ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬಾರದೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Last Updated : Aug 8, 2019, 1:12 PM IST