ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ 22 ಜಾನುವಾರುಗಳನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಪೊಲೀಸರು ಕುಮಟಾದ ಹೊಳೆಗದ್ದೆ ಟೋಲ್‌ಗೇಟ್ ಬಳಿ ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಪೊಲೀಸರು ತಪಾಸಣೆ ನಡೆಸಿದಾಗ 13 ಕೋಣಗಳು, 9 ಎಮ್ಮೆಗಳು ಪತ್ತೆಯಾಗಿವೆ. ಇವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.