ಕಾರವಾರ: ಜಿಲ್ಲೆಗೆ ಮಹಾರಾಷ್ಟ್ರದಿಂದ ಆಗಮಿಸಿದ 6 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
ಉತ್ತರ ಕನ್ನಡಕ್ಕೆ ಕಂಟಕವಾದ 'ಮಹಾ' ನಂಜು... ಇಂದು ಮತ್ತೆ 6 ಕೇಸ್ ಪತ್ತೆ!
ಮಹಾರಾಷ್ಟ್ರದಿಂದ ಆಗಮಿಸಿದ ಇಬ್ಬರು ಮಕ್ಕಳು, ಓರ್ವ ಬಾಲಕಿ, ಇಬ್ಬರು ಯುವಕರು ಹಾಗೂ ಓರ್ವ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಆ ಪೈಕಿ ಯಲ್ಲಾಪುರದಲ್ಲಿ 4, ಸಿದ್ದಾಪುರ ಹಾಗೂ ಹೊನ್ನಾವರದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.
ಉತ್ತರ ಕನ್ನಡಕ್ಕೆ ಕಂಟಕವಾದ 'ಮಹಾ' ನಂಜು
ಮಹಾರಾಷ್ಟ್ರದಿಂದ ಆಗಮಿಸಿದ ಇಬ್ಬರು ಮಕ್ಕಳು, ಓರ್ವ ಬಾಲಕಿ, ಇಬ್ಬರು ಯುವಕರು ಹಾಗೂ ಓರ್ವ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಆ ಪೈಕಿ ಯಲ್ಲಾಪುರದಲ್ಲಿ 4, ಸಿದ್ದಾಪುರ ಹಾಗೂ ಹೊನ್ನಾವರದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.