ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ಒಂದೇ ದಿನ 616 ಸೋಂಕಿತರು ಪತ್ತೆಯಾಗಿ ಆತಂಕ ಸೃಷ್ಟಿಯಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಬಿಗಿ ಕ್ರಮದ ನಡುವೆಯೂ ಕಳೆದ ಒಂದು ವಾರದಿಂದ ಸೋಂಕಿತರ ಸಂಖ್ಯೆ ಏರುತ್ತಲೇ ಸಾಗಿದ್ದು ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಒಂದೇ ದಿನ 600 ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿ ಆತಂಕ ಸೃಷ್ಟಿಯಾಗಿದೆ.
ಸದ್ಯ ಜಿಲ್ಲೆಯ ಕಾರವಾರದಲ್ಲಿ ಇಂದು 100, ಅಂಕೋಲಾ 127, ಕುಮಟಾ 114, ಭಟ್ಕಳ 65, ಶಿರಸಿ 68, ಸಿದ್ದಾಪುರ 22, ಯಲ್ಲಾಪುರ 24, ಹಳಿಯಾಳ 53 ಹಾಗೂ ಜೊಯಿಡಾದಲ್ಲಿ 43 ಪ್ರಕರಣಗಳು ಪತ್ತೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಒಟ್ಟು 19,348 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 16,797 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 2328 ಸಕ್ರಿಯ ಪ್ರಕರಣಗಳಿದ್ದು, ಇಂದು 5 ಮಂದಿ ಸೇರಿ ಈವರೆಗೆ ಒಟ್ಟು 223 ಮಂದಿ ಸಾವನ್ನಪ್ಪಿದ್ದಾರೆ.