ಶಿರಸಿ: ನಗರದ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯನಿರತ ಆರೋಗ್ಯ ಸಿಬ್ಬಂದಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಸ್ಕ್ ಯಾಕೆ ಹಾಕಿಲ್ಲ ಅಂದಿದ್ದಕ್ಕೆ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ: ವ್ಯಕ್ತಿಯ ಬಂಧನ - Sirsi latest news
ಆಸ್ಪತ್ರೆಯ ಆವರಣದಲ್ಲಿ ಮಾಸ್ಕ್ ಧರಿಸದೆ ಬಂದಿದ್ದು, ಆರೋಗ್ಯ ಸಿಬ್ಬಂದಿ ಪ್ರಶ್ನಿಸಿದ್ದಕ್ಕೆ ಕೋಪಗೊಂಡಿದ್ದಾನೆ. ನಂತರ ಆರೋಗ್ಯ ಸಿಬ್ಬಂದಿ ಅಣ್ಣಪ್ಪ ನಾಯ್ಕ ಹಾಗೂ ಗೋವಿಂದ ನಾಯ್ಕ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆ ಆರೋಪಿಯನ್ನು ಬಂಧಿಸಲಾಗಿದೆ.
ಮಾಸ್ಕ್ ಯಾಕೆ ಹಾಕಿಲ್ಲ ಅಂದಿದ್ದಕ್ಕೆ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ
ಇಲ್ಲಿನ ಇಂದಿರಾನಗರದ ಮೈನುದ್ದೀನ್ ಶೇಖ್ ಬಂಧಿತ ಆರೋಪಿ. ಈತ ಆಸ್ಪತ್ರೆಯ ಆವರಣದಲ್ಲಿ ಮಾಸ್ಕ್ ಧರಿಸದೆ ಬಂದಿದ್ದು, ಆರೋಗ್ಯ ಸಿಬ್ಬಂದಿ ಪ್ರಶ್ನಿಸಿದ್ದಕ್ಕೆ ಕೋಪಗೊಂಡಿದ್ದಾನೆ. ನಂತರ ಆರೋಗ್ಯ ಸಿಬ್ಬಂದಿ ಅಣ್ಣಪ್ಪ ನಾಯ್ಕ ಹಾಗೂ ಗೋವಿಂದ ನಾಯ್ಕ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ.
ಘಟನೆಯಲ್ಲಿ ಸಿಬ್ಬಂದಿಗೆ ಚಿಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಹಲ್ಲೆಕೋರನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.