ಕಾರವಾರ:ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹೊನ್ನಾವರ-ಗೇರುಸೊಪ್ಪ ವೃತ್ತದ ಬ್ಲಾಕ್ ಕಾಂಗ್ರೆಸ್ ಕಚೇರಿ ಸಮೀಪ ಸಂಭವಿಸಿದೆ.
ನಿಯಂತ್ರಣತಪ್ಪಿ ಹೊಂಡಕ್ಕೆ ಬಿದ್ದ ಕಾರು... ಚಾಲಕ ಸ್ಥಳದಲ್ಲಿಯೇ ಸಾವು - ಹೊನ್ನಾವರ
ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಮಾರುತಿ ಸ್ವಿಫ್ಟ್ ಕಾರು ಚಲಾಯಿಸಿಕೊಂಡು ಬರುತ್ತಿರುವ ಸಂದರ್ಭದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಕಾರನ್ನು ಮೇಲಕ್ಕೆ ಎತ್ತಿಸಿದ್ದಾರೆ.
ಚಾಲಕ ಸ್ಥಳದಲ್ಲಿಯೇ ಸಾವು
ಕಾರವಾರ ತಾಲೂಕಿನ ಬಾಡದ ಮಹಾಲೆವಾಡದ ನಿವಾಸಿ ನಿಖಿಲ್ ಶೆಣ್ವಿ (23) ಮೃತಪಟ್ಟ ಚಾಲಕ. ಹೊನ್ನಾವರದ ಆಕಾಶ್ ಅರುಣ್ ಪ್ರಭು (26) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಮಾರುತಿ ಸ್ವಿಫ್ಟ್ ಕಾರು ಚಲಾಯಿಸಿಕೊಂಡು ಬರುತ್ತಿರುವ ಸಂದರ್ಭದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಕಾರನ್ನು ಮೇಲಕ್ಕೆ ಎತ್ತಿಸಿದ್ದಾರೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.