ಕಾರವಾರ:ಆಹಾರ ಹುಡುಕಿ ನಾಡಿನತ್ತ ಹೆಜ್ಜೆ ಹಾಕಿದ್ದ ಚಿರತೆಯೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಹಿಡಿದು ಪುನಃ ಕಾಡಿಗೆ ಬಿಟ್ಟಿರುವ ಘಟನೆ ಹೊನ್ನಾವರ ತಾಲೂಕಿನ ಕೆರೆಕೋಣ ಗ್ರಾಮದಲ್ಲಿ ನಡೆದಿದೆ.
ಸಾಲ್ಕೋಡ್ ಗ್ರಾಮದ ಕೆರೆಕೋಣ ಸಮೀಪದ ಮನೆಯೊಂದರ ಬಾವಿಗೆ ಆಹಾರ ಅರಸಿ ಬಂದಿದ್ದ ಒಂದುವರೆ ವರ್ಷದ ಚಿರತೆಯು ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿತ್ತು. ಬಾವಿಯಿಂದ ಮೇಲೆ ಬರಲು ಹರಸಾಹಸ ಪಡುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.