ಕರ್ನಾಟಕ

karnataka

ETV Bharat / state

14 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿ ಅಂದರ್​​​​ - Shirasi Market police

ಇಂದಿರಾ ನಗರದ ಇಫ್ತಿಯಾರ್ ಅಬ್ದುಲ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ತನ್ನ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

a-man-arrested-after-14-years-by-police
14 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿ ಅಂದರ್​​​​

By

Published : Sep 19, 2020, 12:59 PM IST

ಶಿರಸಿ (ಉತ್ತರ ಕನ್ನಡ): 14 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಿರುಗಾಡುತ್ತಿದ್ದ ಆರೋಪಿಯೋರ್ವನನ್ನು ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇಲ್ಲಿನ ಇಂದಿರಾ ನಗರದ ಇಫ್ತಿಯಾರ್ ಅಬ್ದುಲ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ತನ್ನ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಈಗ ಖಚಿತ ಮಾಹಿತಿ ಮೇರೆಗೆ ಈತನನ್ನು ಮಾರುಕಟ್ಟೆ ಠಾಣೆ ಪಿಎಸ್ಐ ನಾಗಪ್ಪ ಹಾಗೂ ಸಿಬ್ಬಂದಿಯ ತಂಡ ವಶಕ್ಕೆ ಪಡೆದಿದೆ. ಸುಮಾರು 14 ವರ್ಷಗಳ ಹಿಂದೆ ಹೊಡೆದಾಟಕ್ಕೆ ಸಂಬಂಧಿಸಿದಂತೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ABOUT THE AUTHOR

...view details