ಕಾರವಾರ:ವಿಡಿಯೋ ಕಾಲ್ನಲ್ಲಿ ಪತ್ನಿಯೊಂದಿಗೆ ಮಾತನಾಡುತ್ತಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕಾರವಾರ-ಚಿತ್ತಾಕುಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಿತ್ತಾಕುಲದ ನಾಕುದಾಮೊಹಲ್ಲಾ ನಿವಾಸಿ ಮಹ್ಮದ್ ಶಫೀಕ್ ಖಾನ್(34) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ನಿರುದ್ಯೋಗಿಯಾಗಿದ್ದ ಮಹ್ಮದ್, ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಗೋವಾದ ವಾಸ್ಕೋದಲ್ಲಿರುವ ತನ್ನ ಪತ್ನಿಗೆ ವಾಟ್ಸಾಪ್ನಲ್ಲಿ ವಿಡಿಯೋ ಕರೆ ಮಾಡಿ ತನಗೆ ಜೀವನ ಸಾಕಾಗಿದೆ. ತಾನು ಸಾಯುತ್ತೇನೆ ಎಂದು ಹೇಳಿಕೊಂಡಿದ್ದರಂತೆ.
ಇದನ್ನೂ ಓದಿ:'ಮಹೀಂದ್ರಾ ಕುಟುಂಬಕ್ಕೆ ನಿಮಗೆ ಸ್ವಾಗತ'.. ತುಮಕೂರಿನ ಕೆಂಪೇಗೌಡರಿಗೆ ಧನ್ಯವಾದ ಅರ್ಪಿಸಿದ ಆನಂದ್ ಮಹೀಂದ್ರಾ!