ಶಿರಸಿ : ನಗರದಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಬಂಧಿತ ಆರೋಪಿಗಳ ಸಂಪರ್ಕದಲ್ಲಿರುವ ಸಂಶಯಾಸ್ಪದ ವ್ಯಕ್ತಿಯೋರ್ವನನ್ನು ಇಲ್ಲಿನ ಮಾರುಕಟ್ಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶಿರಸಿ : ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಶಯಾಸ್ಪದ ವ್ಯಕ್ತಿ ಬಂಧನ - ಶಿರಸಿ
ಶಿರಸಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಶಯಾಸ್ಪದ ವ್ಯಕ್ತಿಯೊರ್ವನನ್ನು ಇಲ್ಲಿನ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿರಸಿ : ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಶಯಾಸ್ಪದ ವ್ಯಕ್ತಿ ಬಂಧನ !
ನೆಹರೂ ನಗರದ ಅಲ್ತಾಫ್ ಅಲಿಯಾಸ್ ಆಟೋ ಆಲ್ತಾಫ್ ಈತನನ್ನು ಪೊಲೀಸರು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಮೇಲೆ ಭದ್ರತಾ ಕಾಯ್ದೆಯಡಿ ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 15 ದಿನಗಳಿಂದ ಶಿರಸಿಯಲ್ಲಿ ಗಾಂಜಾ ಸಂಬಂಧಿಸಿದಂತೆ ತೀವ್ರ ಕಾರ್ಯಾಚರಣೆ ನಡೆಯುತ್ತಿದ್ದು, ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಪ್ರತಿ ದಿನ ಆರೋಪಿಗಳನ್ನು ವಶಕ್ಕೆ ಪಡೆದು ನಗರದ ಗಾಂಜಾ ವಾಲಾಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.