ಕಾರವಾರ: ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ಹಿನ್ನೆಲೆ ಭಾರತದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯ ರೈಲ್ವೆ ನಿಲ್ದಾಣ ಸೇರಿದಂತೆ ಇತರ ಸೂಕ್ಷ್ಮ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತೀವ್ರ ತಪಾಸಣೆ ನಡೆಸಿದ್ದಾರೆ.
ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ : ಭಟ್ಕಳದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ಹಿನ್ನೆಲೆ ಭಾರತದಾದ್ಯಂತ ಹೈ ಅಲರ್ಟ್ ಘೋಷಣೆ. ಭಟ್ಕಳದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಸುರಂಗ ಮಾರ್ಗಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ.
ಶ್ರೀಲಂಕಾದಲ್ಲಿ ಉಗ್ರರು ನಡೆಸಿದ ಕೃತ್ಯದಲ್ಲಿ ಭಾರತವೂ ಟಾರ್ಗೆಟ್ ಆಗಿತ್ತು ಎನ್ನುವ ಗುಪ್ತಚರ ವರದಿ ಹೊರಬೀಳುತ್ತಿದ್ದಂತೆ ಅಲರ್ಟ್ ಆಗಿರುವ ಭದ್ರತಾ ಇಲಾಖೆ, ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ಭಟ್ಕಳದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಸುರಂಗ ಮಾರ್ಗಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ.
ಗುಪ್ತಚರ ಇಲಾಖೆಯು 19 ಉಗ್ರರು ರೈಲುಗಳಲ್ಲಿ ಓಡಾಡುತ್ತಿದ್ದಾರೆ ಎನ್ನುವ ಮಾಹಿತಿ ಹೊರಹಾಕಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಅದರಂತೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ತಪಾಸಣೆ ನಡೆಸಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಂಡು ತಪಾಸಣೆ ನಡೆಸಲಾಗುತ್ತಿದೆ.
TAGGED:
HIGH ALERT