ಶಿರಸಿ (ಉತ್ತರಕನ್ನಡ): ಮನೆಯಲ್ಲಿನ ಕಷ್ಟ ನೋಡಲಾಗದೇ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನೀರ್ನಳ್ಳಿಯಲ್ಲಿ ನಡೆದಿದೆ.
ನಿರ್ನಳ್ಳಿಯ ರವಿತೇಜ ಗಣಪತಿ ಭಟ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯಲ್ಲಿ ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯ ನಿರ್ವಹಣೆ ಕಷ್ಟ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.