ಶಿರಸಿ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡದ ಯಲ್ಲಾಪುರದ ಉದ್ಯಮನಗರದಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ ಯುವತಿ.. - today death news
ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡದ ಯಲ್ಲಾಪುರದ ಉದ್ಯಮನಗರದಲ್ಲಿ ನಡೆದಿದೆ.
ನೇಣಿಗೆ ಕೊರಳೊಡ್ಡಿದ ಯುವತಿ
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಾ ನಾಯ್ಕ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಕಳೆದ 5 ದಿನಗಳ ಹಿಂದೆ ಮನೆಗೆ ಬಂದು ತಂದೆ-ತಾಯಿಯೊಂದಿಗೆ ಚೆನ್ನಾಗಿಯೇ ಇದ್ದಳು. ಆದರೆ, ಏಕಾಏಕಿ ಇಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ವೇಲಿನಿಂದ ಮನೆಯ ಕಿಟಕಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.