ಶಿರಸಿ: ರೈತನಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ತತ್ವಣಗಿ ಗ್ರಾಮದ ಲೆಕ್ಕಾಧಿಕಾರಿ ಗಿರೀಶ್ ರಾಣದೇವ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ರೈತನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ - Tahsildar Office
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಹಶೀಲ್ದಾರ್ ಕಚೇರಿಯಲ್ಲಿ ರೈತನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಎಸಿಬಿ ದಾಳಿ
ಈತ ತತ್ವಣಗಿ ಗ್ರಾಮದ ರೈತ ಬೀಮರಾವ್ ರಾಯಪ್ಪ ಕುರುಬೂರ್ ಎಂಬುವವರ ಬಳಿ ಖಾತೆ ಪೋಡಿ ಮಾಡಿಕೊಡಲು ಲಂಚ ಕೇಳಿದ್ದ ಎನ್ನಲಾಗಿದೆ. ಎಸಿಬಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಾರವಾರದ ಎಸಿಬಿ ಡಿವೈಎಸ್ಪಿ ಗಿರೀಶ್ ನೇತೃತ್ವದ ತಂಡ ದಾಳಿ ನಡೆಸಿ ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರವಾರ ಎಸಿಬಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Last Updated : Jun 27, 2019, 4:09 PM IST