ಕಾರವಾರ(ಉತ್ತರ ಕನ್ನಡ): ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ವರದರಾಜ್ ಹೊಟೇಲ್ ಬಳಿ ಶನಿವಾರ ನಡೆದಿದೆ.
ಮಹಾರಾಷ್ಟ್ರದ ಪುಣೆ ಮೂಲದ ಒಂದೇ ಕುಟುಂಬದ ನಾಲ್ವರು ಗೋಕರ್ಣದ ಮಹಾಬಲೇಶ್ವರ ದೇವರ ದರ್ಶನ ಪಡೆದುಕೊಂಡು ವಾಪಸ್ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು, ಓರ್ವ ಪುರುಷ ಗಂಭೀರವಾಗಿ ಗಾಯಗೊಂಡಿದ್ದಾರೆ.