ಶಿರಸಿ: ಪರೀಕ್ಷೆ ಬರೆಯಲು ಸ್ಕೂಟಿಯಲ್ಲಿ ಬರುತ್ತಿದ್ದ ವಿದ್ಯಾರ್ಥಿಗಳು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಬನವಾಸಿ ಬಳಿ ಇಂದು ಬೆಳಗ್ಗೆ ನಡೆದಿದೆ.
ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳ ಸ್ಕೂಟಿ ಅಪಘಾತ: ಓರ್ವನ ಸ್ಥಿತಿ ಗಂಭೀರ - ವಾಹನ ಅಪಘಾತ ಲೆಟೆಸ್ಟ್ ನ್ಯೂಸ್
ನಿಯಂತ್ರಣ ತಪ್ಪಿ ಸ್ಕೂಟಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಬನವಾಸಿ ಬಳಿ ಇಂದು ಬೆಳಿಗ್ಗೆ ನಡೆದಿದೆ. ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ.
![ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳ ಸ್ಕೂಟಿ ಅಪಘಾತ: ಓರ್ವನ ಸ್ಥಿತಿ ಗಂಭೀರ Accident](https://etvbharatimages.akamaized.net/etvbharat/prod-images/768-512-06:15:35:1593693935-kn-srs-02-sslc-students-accident-photo-ka10005-02072020181433-0207f-1593693873-395.jpg)
Accident
ತಾಲೂಕಿನ ಬನವಾಸಿ ಸಮೀಪದ ಬಾಶಿಯ ಗಣೇಶ ಬಣಗಾರ ಹಾಗೂ ಆಕಾಶ ನಾಯ್ಕ ಗಾಯಗೊಂಡ ವಿದ್ಯಾರ್ಥಿಗಳಾಗಿದ್ದು, ಬಾಶಿ ತಿರುವಿನಲ್ಲಿ ಈ ಅಪಘಾತ ನಡೆದಿದೆ.
ಅಪಘಾತದಲ್ಲಿ ಪರವಾನಗಿ ಇಲ್ಲದೆ ಗಾಡಿ ಓಡಿಸುತ್ತಿದ್ದ ವಿದ್ಯಾರ್ಥಿ ಆಕಾಶ ನಾಯ್ಕ್ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಧಾರವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿ ಗಣೇಶ ಶಿರಸಿಯ ಟಿ.ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.