ಭಟ್ಕಳ (ಉತ್ತರಕನ್ನಡ): ಭಟ್ಕಳ ತಾಲೂಕಿನ ಪುರವರ್ಗ ಗಣೇಶ ನಗರದ ಬಯಲು ಪ್ರದೇಶಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ, ಪಕ್ಕದಲ್ಲಿರುವ ಗುಜರಿ ಅಂಗಡಿಗೂ ಆವರಿಸಿದ್ದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಪುರವರ್ಗ ಗಣೇಶ ನಗರ ಸಮೀಪವಿರುವ ರೈಲ್ವೆ ಹಳಿಯ ಪಕ್ಕದಲ್ಲಿನ ಬಯಲು ಪ್ರದೇಶಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಗಾಳಿ ಪ್ರಮಾಣ ಹೆಚ್ಚಾಗಿದ್ದರಿಂದ ಈ ಬೆಂಕಿ, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿದ್ದ ಗುಜರಿ ಅಂಗಡಿಗೂ ಆವರಿಸಿದೆ. ಇದರಿಂದ ಅಂಗಡಿಯ ಹಿಂಭಾಗದಲ್ಲಿರುವ ಪ್ಲಾಸ್ಟಿಕ್ ಸಾಮಗ್ರಿಗಳಿಗೆ ಬೆಂಕಿ ತಗುಲಿ ಸಂಪೂರ್ಣ ಹೊಗೆ ಆವರಿಸಿದೆ.