ಕರ್ನಾಟಕ

karnataka

ETV Bharat / state

ಶಿರಸಿ ನೂತನ ಉಪವಿಭಾಧಿಕಾರಿಯಾಗಿ ಆಕೃತಿ ಬನ್ಸಾಲ್ ನೇಮಕ - Shirsi uttarakannada latest news

ಕೊವಿಡ್ 19 ಸಂದರ್ಭದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿ ಜನಮನ್ನಣೆಗೆ ಪಾತ್ರವಾಗಿದ್ದ ಉಪವಿಭಾಧಿಕಾರಿ ಡಾ. ಈಶ್ವರ ಉಳ್ಳಾಗಡ್ಡಿ ಅವರ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಆಕೃತಿ ಬನ್ಸಾಲ್ ಅವರನ್ನು ನೇಮಕ ಮಾಡಲಾಗಿದೆ.

Akruthi bansal
Akruthi bansal

By

Published : Aug 25, 2020, 8:29 PM IST

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನೂತನ ಉಪವಿಭಾಧಿಕಾರಿಯಾಗಿ 2017ನೇ ಬ್ಯಾಚ್ ನ ಐಎಎಸ್ ಅಧಿಕಾರಿ, ಯುಪಿಎಸ್ ಸಿ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ 52ನೇ ಸ್ಥಾನ ಗಳಿಸಿದ್ದ ಆಕೃತಿ ಬನ್ಸಾಲ್ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊವಿಡ್ 19 ಸಂದರ್ಭದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿ ಜನಮನ್ನಣೆಗೆ ಪಾತ್ರವಾಗಿದ್ದ ಉಪವಿಭಾಧಿಕಾರಿ ಡಾ. ಈಶ್ವರ ಉಳ್ಳಾಗಡ್ಡಿ ಅವರ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಆಕೃತಿ ಅವರನ್ನು ನೇಮಕ ಮಾಡಲಾಗಿದೆ. ಉಳ್ಳಾಗಡ್ಡಿ ಅವರು ಶಿರಸಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ, ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಕೆಲ ಕಾಲ ಶಿರಸಿ ನಗರಸಭೆ ಪೌರಾಯುಕ್ತರಾಗಿ, ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ನ ಆಡಳಿತಾಧಿಕಾರಿಯಾಗಿಯೂ ಸಹ ಶಿರಸಿಯಲ್ಲಿ ಸೇವೆ ಸಲ್ಲಿಸಿದ್ದಾರೆ.

ABOUT THE AUTHOR

...view details