ಭಟ್ಕಳ:ತಾಲೂಕಿನಲ್ಲಿ ಹಾಗೂ ಹೊನ್ನಾವರದಲ್ಲಿ ಡಿ. 22ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮತದಾನ ಯಶಸ್ವಿಯಾಗಿ ನಡೆಸಲು ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಆಯುಕ್ತ ಭರತ್ ಎಸ್. ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 16 ಗ್ರಾಮ ಪಂಚಾಯಿತಿಗಳ 261 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 672 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಈಗಾಗಲೇ 20 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಮಡಿಕೇರಿ, ಕೋಟದಮಕ್ಕಿ ಹಾಗೂ ತಲಗೋಡ ಕ್ಷೇತ್ರಕ್ಕೆ ನಾಮಪತ್ರ ಬಂದಿಲ್ಲವಾದ್ದರಿಂದ ಮತದಾನ ನಡೆಯುತ್ತಿಲ್ಲ. ಉಳಿದಂತೆ ಎಲ್ಲಾ ಕ್ಷೇತ್ರಗಳಿಗೆ ಡಿ. 22ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯತನಕ ಮತದಾನ ನಡೆಯಲಿದ್ದು, ಮತದಾನ ಮಾಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂದರು.