ಉತ್ತರ ಕನ್ನಡ : ನಾನು ಎಂದಿಗೂ ಸಚಿವ ಸ್ಥಾನದ ಆಕಾಂಕ್ಷಿಯೇ ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ಸಿಗುವ ವಿಶ್ವಾಸವಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದ್ರು.
ನಾನೂ ಯಾವತ್ತೂ ಸಚಿವ ಸ್ಥಾನದ ಆಕಾಂಕ್ಷಿಯೇ: ಶಾಸಕ ಶಿವರಾಮ ಹೆಬ್ಬಾರ ಬಾಂಬ್ - kannadanews
ನಾನು ಯಾವತ್ತೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ, ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ.
ಶಿರಸಿಯ ಬೀಳೂರಿನಲ್ಲಿ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಈಟಿವಿ ಭಾರತ್ ಪ್ರತಿನಿಧಿಯೊಂದಿಗೆ ಮಾತನಾಡಿ, ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದ ಅವಕಾಶ ಸಿಗುವ ಸಂಪೂರ್ಣ ವಿಶ್ವಾಸವಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಹಾಗಾಗಿ ಒಂದೊಮ್ಮೆ ಸಚಿವ ಸ್ಥಾನ ನೀಡದಿದ್ದರೆ ನನಗಾಗುವ ಬೇಸರದ ಕುರಿತು ಮುಂಬರುವ ದಿನಗಳಲ್ಲಿ ಮಾತನಾಡುವುದಾಗಿ ಹೇಳಿದರು.
ಈ ಮೊದಲಿನಿಂದಲೂ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳುತ್ತಾ ಬಂದಿದ್ದೇನೆ. ಅವಕಾಶ ಸಿಗುವ ಮೊದಲೇ ನಾನು ಯಾಕೆ ಬೇಸರದ ಕುರಿತು ಮಾತನಾಡಿ ಸಚಿವ ಸ್ಥಾನ ತಪ್ಪಿಸಿಕೊಳ್ಳಲಿ ? ಸಂಪುಟ ವಿಸ್ತರಣೆ ಆದ ಮೇಲೆ ಈ ಕುರಿತು ಹೆಚ್ಚಿನ ಅಭಿಪ್ರಾಯ ನೀಡುತ್ತೇನೆ ಎಂದು ಶಿವರಾಮ ಹೆಬ್ಬಾರ್ ತಿಳಿಸಿದ್ರು.