ಭಟ್ಕಳ (ಉತ್ತರ ಕನ್ನಡ) :ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ವಾಹನವೊಂದು ಟೋಲ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೂರು ಟೋಲ್ ಗೇಟ್ನಲ್ಲಿ ಸಂಭವಿಸಿದೆ.
ಶಿರೂರು ಟೋಲ್ ಕಂಬಕ್ಕೆ ಡಿಕ್ಕಿಯಾದ ಆ್ಯಂಬುಲೆನ್ಸ್; ನಾಲ್ವರು ದಾರುಣ ಸಾವು...ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಆ್ಯಂಬುಲೆನ್ಸ್ ವಾಹನ ಪಲ್ಟಿ
ಆ್ಯಂಬುಲೆನ್ಸ್ ವಾಹನವೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಶಿರೂರು ಟೋಲ್ ಗೇಟ್ನಲ್ಲಿ ಸಂಭವಿಸಿದೆ. ಭೀಕರ ಅಪಘಾತದ ದೃಶ್ಯ ಇಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್ ಜಖಂ ಆಗಿದೆ.
ನಾಲ್ವರು ದಾರುಣ ಸಾವು...ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಶಿರೂರು ಟೋಲ್ ಪ್ಲಾಝಾ ಬಳಿ ಬರುತ್ತಿದ್ದಂತೆಯೇ ಟೋಲ್ ಗೇಟ್ ಸಿಬ್ಬಂದಿಯನ್ನು ತಪ್ಪಿಸಲು ಹೋಗಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ಸಂಚಾರಕ್ಕೆ ನೆರವು ನೀಡಲು ಮುಂದಾಗಿದ್ದ ಟೋಲ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭೀಕರ ಅಪಘಾತದ ದೃಶ್ಯ ಇಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್ ಜಖಂ ಆಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿದ್ದು ಬೈಂದೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Last Updated : Jul 21, 2022, 5:53 PM IST