ಕಾರವಾರ:ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಇಂದು ಅಪಾರ ಬೆಂಬಲಿಗರೊಂದಿಗೆ ತೆರಳಿ ಏಳನೇ ಬಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಅನಂತಕುಮಾರ್ ಹೆಗಡೆ - ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ
ಒಟ್ಟು ಆರು ಬಾರಿ ಚುನಾವಣೆ ಎದುರಿಸಿರುವ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಐದು ಬಾರಿ ಗೆದ್ದಿದ್ದಾರೆ. ಇದೀಗ ಏಳನೇ ಬಾರಿ ಲೋಕಸಭಾ ಚುನಾವಣೆಗೆ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
![ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಅನಂತಕುಮಾರ್ ಹೆಗಡೆ](https://etvbharatimages.akamaized.net/etvbharat/images/768-512-2878046-428-41ba3f91-3675-43c9-b7dc-1fc0ad84a33e.jpg)
ಕಾರವಾರದ ಅಮದಳ್ಳಿ ಮಹಾಗಣಪತಿ ದೇವಸ್ಥಾನ ಹಾಗೂ ನಗರದ ಮಹಾದೇವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಬಳಿಕ ಬಿಜೆಪಿ ಕಾರ್ಯಾಲಯಕ್ಕೆ ತೆರಳಿ ಅಲ್ಲಿಂದ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಈ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ರೂಪಾಲಿ ನಾಯ್ಕ, ಸುನೀಲ್ ನಾಯ್ಕ, ದಿನಕರ್ ಶೆಟ್ಟಿ ಸೇರಿದಂತೆ ಅಪಾರ ಬೆಂಬಲಿಗರು ಜೊತೆಯಲ್ಲಿದ್ದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದರು. ನಾಮಪತ್ರ ಸಲ್ಲಿಕೆಗೆ ಐವರು ಮಾತ್ರ ತೆರಳಲು ಅವಕಾಶವಿದ್ದರಿಂದ ಅನಂತಕುಮಾರ್ ಹೆಗಡೆ, ಅವರ ಪತ್ನಿ ಶ್ರೀರೂಪಾ ಹೆಗಡೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ನಾಯ್ಕ, ವಕೀಲ ಬಿ.ಎಸ್. ಪೈ ಸೇರಿ ಐವರು ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ಆರು ಬಾರಿ ಚುನಾವಣೆ ಎದುರಿಸಿರುವ ಅನಂತಕುಮಾರ್ ಐದು ಬಾರಿ ಗೆದ್ದಿದ್ದಾರೆ. ಇದೀಗ ಏಳನೇ ಬಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.