ಭಟ್ಕಳ:ಉತ್ತರ ಕನ್ನಡ ಜಿಲ್ಲೆಯ ಹಲವು ಸಮಸ್ಯೆ ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಇಂದು ಭೇಟಿಯಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಹೆಗಡೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಾಸಕರ ನಿಯೋಗ ಸಿಎಂ ಭೇಟಿ - Ananth Kumar Hegde
ಉತ್ತರ ಕನ್ನಡ ಜಿಲ್ಲೆಯ ನೆರೆ ಹಾವಳಿ ಪರಿಹಾರದ ಬಗ್ಗೆ ಹೆಗಡೆ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಬಿಎಸ್ವೈ ಭೇಟಿ ಮಾಡಿದ್ದು, ಇದಕ್ಕೆ ಸ್ಪಂದಿಸಿದ ಬಿಎಸ್ವೈ ಶರಾವತಿ ಎಡ ಮತ್ತು ಬಲ ದಂಡೆಯ ಮೇಲೆ ವಾಸಿಸುತ್ತಿರುವ ನೆರೆಹಾವಳಿ ಸಂತ್ರಸ್ತರಿಗೆ ಪರಿಹಾರದ ಭರವಸೆ ನೀಡಿದ್ದಾರೆ.
ಹೆಗಡೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಾಸಕರ ನಿಯೋಗ ಸಿಎಂ ಭೇಟಿ
ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ನೆರೆ ಹಾವಳಿ ಪರಿಹಾರದ ಬಗ್ಗೆ ಚರ್ಚೆಯನ್ನು ನಡೆಸಿದ್ದು, ಇದಕ್ಕೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಶರಾವತಿ ಎಡ ಮತ್ತು ಬಲ ದಂಡೆಯ ಮೇಲೆ ವಾಸಿಸುತ್ತಿರುವ ನೆರೆಹಾವಳಿ ಸಂತ್ರಸ್ತರ ಮನೆಗಳ ರಿಪೇರಿಗೆ 1 ಲಕ್ಷ ಮತ್ತು ಸಂಪೂರ್ಣ ಮನೆಯನ್ನು ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.