ಶಿರಸಿ :ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆ ಇದೀಗ ರಂಗೇರಿದ್ದು ಬಿಜೆಪಿ ಅಭ್ಯರ್ಥಿ ಅನಂತ್ಕುಮಾರ್ ಹೆಗಡೆ ಟೆಂಪಲ್ ರನ್ ನಡೆಸಿದ್ದಾರೆ. ಏಪ್ರಿಲ್ 2 ರಂದು ನಾಮಪತ್ರ ಸಲ್ಲಿಸಲು ತಯಾರಿ ನಡೆಸಿರುವ ಹೆಗಡೆ, ಇಂದು ತಾಲೂಕಿನ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಗೆಲ್ಲಿಸು ತಾಯೇ ಮಾರಿಕಾಂಬೆ.... ಮಧುಕೇಶ್ವರನಿಗೂ ಅಡ್ಡಬಿದ್ದ ಕೇಂದ್ರ ಸಚಿವ... - temples
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಅನಂತ್ ಕುಮಾರ್ ಹೆಗಡೆ ಇಂದು ತಾಲೂಕಿನ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇವಸ್ಥಾನಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆಗೆ ಏ.2 ರಂದು ತಾವು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಈ ಚುನಾವಣೆ ಪ್ರಜಾತಂತ್ರದ ವಿಶಿಷ್ಠಪೂರ್ಣ ಚುನಾವಣೆಯಾಗಿದೆ. ದೇಶಕ್ಕೆ ಹೊಸ ದಿಕ್ಕು ಸಿಗಲಿದೆ. ರಾಷ್ಟ್ರೀಯತೆಯ ಆಧಾರದ ಮೇಲೆ ಹಾಗೂ ಭವ್ಯ ರಾಷ್ಟ್ರ ನಿರ್ಮಾಣ ಮಾಡುವ ಸಂಕಲ್ಪದ ಮೇಲೆ ನಾವು ಚುನಾವಣೆ ಎದುರಿಸುತ್ತಿದ್ಧೇವೆ. ಕ್ಷೇತ್ರದ ಜನರ ಮೇಲೆ ದೇವರ ಆಶೀರ್ವಾದ ಇರಲಿ ಎಂದು ಕೇಳಿಕೊಂಡಿದ್ದೇನೆ. ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಬಹುಮತದೊಂದಿಗೆ ಬಿಜೆಪಿ ಆಯ್ಕೆಯಾಗಲಿದೆ. ಜೊತೆಗೆ 2ನೇ ಮೂರಷ್ಟು ಬಹುಮತ ಬಿಜೆಪಿಗೆ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನಂತ್ಕುಮಾರ್ ಹೆಗಡೆ ಶಿರಸಿ ಶ್ರೀ ಮಾರಿಕಾಂಬಾ ದೇವಾಸ್ಥಾನ, ಬನವಾಸಿಯ ಮಧುಕೇಶ್ವರ ದೇವಾಲಯ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು