ಕರ್ನಾಟಕ

karnataka

ETV Bharat / state

ಶಸ್ತ್ರ ಚಿಕಿತ್ಸೆಗೆ ಒಳಗಾದ ಸಂಸದ ಅನಂತಕುಮಾರ್ ಹೆಗಡೆ - MP Anant kumar hegde

ಇತ್ತೀಚೆಗೆ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆ ತಜ್ಞರು ತಕ್ಷಣವೇ ಶಸ್ತ್ರ ಚಿಕಿತ್ಸೆ ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದರು. ಇದೀಗ ಕೆಲವು ದಿನಗಳ ಹಿಂದೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

Ananthakumar Hegde  underwent surgery for long illness
ಶಸ್ತ್ರ ಚಿಕಿತ್ಸೆಗೆ ಒಳಗಾದ ಸಂಸದ ಅನಂತಕುಮಾರ್ ಹೆಗಡೆ

By

Published : Mar 6, 2021, 10:44 PM IST

ಶಿರಸಿ (ಉ.ಕ):ಸಂಸದ ಅನಂತಕುಮಾರ್​ ಹೆಗಡೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಅವರು ಯಾವುದೇ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಅವರ ಆಪ್ತ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

ಸಂಸದ ಹೆಗಡೆ ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಅದಾಗ್ಯೂ ಕಳೆದ ಲೋಕಸಭಾ ಚುನಾವಣೆಯ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವೇ ಉಳಿಯುತ್ತಿದ್ದರು.

ಆದರೆ ಇತ್ತೀಚೆಗೆ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆ ತಜ್ಞರು ತಕ್ಷಣವೇ ಶಸ್ತ್ರ ಚಿಕಿತ್ಸೆ ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದರು. ಇದೀಗ ಕೆಲವು ದಿನಗಳ ಹಿಂದೆ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ವೈದ್ಯರು ದೀರ್ಘಾವಧಿಯ ವಿಶ್ರಾಂತಿಯನ್ನು ಪಡೆಯುಲು ಸೂಚಿಸಿರುವ ಹಿನ್ನೆಲೆ ಪೂರ್ಣವಾಗಿ ಗುಣಮುಖರಾಗುವವರೆಗೆ ಕೆಲ ಕಾಲ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಸಿಡಿ ಮಾಡುವವರ ದಂಧೆ ಹೆಚ್ಚಾಗಿದೆ: ಸಚಿವ ಹೆಬ್ಬಾರ್

ABOUT THE AUTHOR

...view details