ಕರ್ನಾಟಕ

karnataka

By

Published : Nov 11, 2020, 5:41 PM IST

ETV Bharat / state

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಕಾರವಾರದಲ್ಲಿ ಅಂಗನವಾಡಿ ನೌಕರರ ಪ್ರತಿಭಟನೆ

ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ 21 ಸಾವಿರಕ್ಕೆ ಹೆಚ್ಚಿಸಿ, ನೌಕರಿ ಕಾಯಂಗೊಳಿಸಬೇಕು. ಜೊತೆಗೆ 10 ಸಾವಿರ ನಿವೃತ್ತಿ ವೇತನ ನೀಡಬೇಕು ಎಂದು ಆಗ್ರಹಿಸಿ ಅಂಗನವಾಡಿ ನೌಕರರು ಕಾರವಾರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

Anganawadi workers protest
ಪ್ರತಿಭಟನೆ

ಕಾರವಾರ: ನ. 26 ರಂದು ನಡೆಯಲಿರುವ ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ಪೂರ್ವ ಭಾವಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರು ಕಾರವಾರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರತಿಭಟನೆ ನಡೆಸಿದ ಅಂಗನವಾಡಿ ನೌಕರರು

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಯೋಜಿತ ಅಖಿಲ ಭಾರತ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್​​​​​ನಿಂದ ನೂರಾರು ಮಹಿಳೆಯರು ನಗರದ ಮಾಲಾದೇವಿ ಮೈದಾನದಿಂದ ಪ್ರಮುಖ ರಸ್ತೆಗಳಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ನೌಕರರು ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ 21 ಸಾವಿರಕ್ಕೆ ಹೆಚ್ಚಿಸಿ, ನೌಕರಿಯನ್ನು ಕಾಯಂಗೊಳಿಸಬೇಕು. ಜೊತೆಗೆ 10 ಸಾವಿರ ನಿವೃತ್ತಿ ವೇತನ ನೀಡಬೇಕು. ನೂತನ ಶಿಕ್ಷಣ ನೀತಿ - 2020 ರ ಅಪಾಯಗಳಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು.‌ ಅಂಗನವಾಡಿ ಕೇಂದ್ರಗಳಲ್ಲಿಯೇ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಿ, ಹೆಚ್ಚುವರಿ ಕೆಲಸ ನಿರ್ಬಂಧಿಸಬೇಕು. ಆರಂಭಿಕ ಬಾಲ್ಯಾವಸ್ಥೆಯ ಪಾಲನೆ ಮತ್ತು ಶಿಕ್ಷಣವನ್ನು ಉಚಿತವಾಗಿ ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಕೊಡಲು ಶಾಸನ ರೂಪಿಸಬೇಕು ಎಂದು ಆಗ್ರಹಿಸಿದರು.

ಕೊರೊನಾ ಸೋಂಕಿನಿಂದ ಮೃತರಾದ 26 ಜನ ಮತ್ತು ಕೆಲಸದ ಒತ್ತಡದಿಂದ ಮೃತರಾದ ಅಂಗನವಾಡಿ ನೌಕರರ ಮಕ್ಕಳಿಗೆ ನೇಮಕಾತಿ ನಿಯಮ ಸಡಿಲಿಸಿ ಅನುಕಂಪದ ಆಧಾರದಲ್ಲಿ ಕೆಲಸ ನೀಡಬೇಕು.‌ ಕೊರೊನಾ ಸಂದರ್ಭದಲ್ಲಿ ಕೆಲಸದ ಒತ್ತಡದಿಂದ ನಿಧನರಾದ 32 ಜನ ಅಂಗನವಾಡಿ ನೌಕರರಿಗೆ ಕನಿಷ್ಠ 5 ಲಕ್ಷ ಪರಿಹಾರವನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ABOUT THE AUTHOR

...view details