ಕಾರವಾರ:ಅಂಗನವಾಡಿ ಕೇಂದ್ರಗಳನ್ನು ಉಳಿಸುವುದು ಅಷ್ಟೇ ಅಲ್ಲ.. ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಅಭಿವೃದ್ಧಿಯಾಗಬೇಕು. ಎಲ್ಕೆಜಿ ಹಾಗೂ ಯುಕೆಜಿ ಶಿಕ್ಷಣವನ್ನೂ ಅಂಗನವಾಡಿಯಲ್ಲಿಯೇ ನೀಡಬೇಕು ಅಂತಾ ಡಿಸೆಂಬರ್ 10ರಂದು ಬೆಂಗಳೂರಿನಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇವತ್ತು ಉತ್ತರಕನ್ನಡದಲ್ಲಿಕರ್ನಾಟಕ ರಾಜ್ಯ ಅಂಗನವಾಡಿ ಜಿಲ್ಲಾ ನೌಕರರು ಸಂಘದಿಂದ ಪ್ರತಿಭಟನಾ ಜಾಥಾ ನಡೆಸಲಾಯಿತು.
ಡಿ.10ರಂದು ಅಂಗನವಾಡಿ ಕಾರ್ಯಕರ್ತೆಯರ ಪಾದಯಾತ್ರೆ.. - ಡಿಸೆಂಬರ್ 10ರಂದು ಅಂಗನವಾಡಿ ಕಾರ್ಯಕರ್ತೆಯರ ಪಾದಯಾತ್ರೆ
ಕೇಂದ್ರದ ಹೊಸ ಶಿಕ್ಷಣ ನೀತಿ, ಅಂಗನವಾಡಿಯಲ್ಲಿಯೇ ಎಲ್ಕೆಜಿ, ಯುಕೆಜಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನಾ ಜಾಥಾ ನಡೆಸಲಾಯಿತು.
![ಡಿ.10ರಂದು ಅಂಗನವಾಡಿ ಕಾರ್ಯಕರ್ತೆಯರ ಪಾದಯಾತ್ರೆ.. Anganwadi activists march on Dec.10](https://etvbharatimages.akamaized.net/etvbharat/prod-images/768-512-5289584-thumbnail-3x2-ker.jpg)
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ..
ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ಲಂಡನ್ ಸೇತುವೆ ಬಳಿ ಸೇರಿದ ಸುಮಾರು ನೂರಾರು ನೌಕರರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಮಾತೃಪೂರ್ಣ ಯೋಜನೆ ಯಶಸ್ವಿಗೆ ಸಹಾಯಕಿಯರನ್ನು ನೀಡಬೇಕು. ಹೊಸ ಶಿಕ್ಷಣ ನೀತಿಯಂತೆ 3 ರಿಂದ 8 ವರ್ಷದ ವರ್ಗೀಕರಣ ನೀತಿಯನ್ನು ಕೈ ಬಿಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ₹21 ಸಾವಿರ ಸಂಬಳ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯ್ತು.