ಕರ್ನಾಟಕ

karnataka

ETV Bharat / state

ಭಟ್ಕಳ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಘೋಷಣೆ - ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಘೋಷಣೆ

ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸದಸ್ಯರ ಸಮಕ್ಷಮದಲ್ಲಿ ಚುನಾವಣಾ ಆಯೋಗ ನಿರ್ದೇಶಿಸಿದ ಸಾಫ್ಟ್​ವೇರ್​ನ್ನು ಬಳಸಿ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

Announcement of Reservation for the position of President and Vice President of Bhatkal Taluk Gram Panchayat
ಭಟ್ಕಳ ತಾಲೂಕು ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಘೋಷಣೆ

By

Published : Jan 30, 2021, 10:38 AM IST

ಭಟ್ಕಳ : ತಾಲೂಕಿನ 16 ಗ್ರಾಮ ಪಂಚಾಯಿತಿವಾರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆಯನ್ನು ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ ನೇತೃತ್ವದಲ್ಲಿ ಇಲ್ಲಿನ ನ್ಯೂ ಇಂಗ್ಲಿಷ್ ಸ್ಕೂಲ್ ಕಮಲಾವತಿ ಸಭಾಭವನದಲ್ಲಿ ನಡೆಸಲಾಯಿತು.

ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸದಸ್ಯರ ಸಮಕ್ಷಮದಲ್ಲಿ ಚುನಾವಣಾ ಆಯೋಗ ನಿರ್ದೇಶಿಸಿದ ಸಾಫ್ಟ್​​ವೇರ್​ನ್ನು ಬಳಸಿ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಕೆಲವು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗ್ರಾಮ ಪಂಚಾಯಿತಿ ಸದಸ್ಯರ ಎದುರಲ್ಲೇ ಅವರಿಂದಲೇ ಲಾಟರಿ ಎತ್ತುವ ಮೂಲಕ‌ ಮೀಸಲಾತಿ ಆಯ್ಕೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಘೋಷಣೆ
ನಿಗದಿಯಂತೆ 16 ಗ್ರಾಮ ಪಂಚಾಯಿತಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮಿಸಲಾತಿ :

ಮಾವಳ್ಳಿ -1 ಗ್ರಾಮ ಪಂಚಾಯಿತಿ ಅನುಸೂಚಿತ ಜಾತಿ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಸಾಮಾನ್ಯ ಮಹಿಳೆಗೆ ಉಪಾಧ್ಯಕ್ಷ ಸ್ಥಾನ,

ಮಾವಳ್ಳಿ-2 ಗ್ರಾಮ ಪಂಚಾಯಿತಿ ಹಿಂದುಳಿದ 'ಅ' ವರ್ಗಕ್ಕೆ ಅಧ್ಯಕ್ಷ ಸ್ಥಾನ, ಅನೂಸೂಚಿತ ಜಾತಿ ಮಹಿಳೆ ಉಪಾಧ್ಯಕ್ಷ ಸ್ಥಾನ,

ಕೊಪ್ಪ ಗ್ರಾಮ ಪಂಚಾಯಿತಿ ಹಿಂದುಳಿದ 'ಅ' ವರ್ಗಕ್ಕೆ ಅಧ್ಯಕ್ಷ ಸ್ಥಾನ, ಅನುಸೂಚಿತ ಪಂಗಡ ಮಹಿಳೆಗೆ ಉಪಾಧ್ಯಕ್ಷ ಸ್ಥಾನ,

ಕಾಯ್ಕಿಣಿ ಗ್ರಾಮ ಪಂಚಾಯಿತಿ ಹಿಂದುಳಿದ 'ಅ' ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗ ಉಪಾಧ್ಯಕ್ಷ ಸ್ಥಾನ,

ಬೆಂಗ್ರೆ ಗ್ರಾಮ ಪಂಚಾಯಿತಿ ಹಿಂದುಳಿದ 'ಅ' ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಹಿಂದುಳಿದ ಬ ವರ್ಗ ಮಹಿಳೆಗೆ ಉಪಾಧ್ಯಕ್ಷ ಸ್ಥಾನ,

ಬೈಲೂರು ಗ್ರಾಮ ಪಂಚಾಯಿತಿ ಹಿಂದುಳಿದ ಬ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಹಿಂದುಳಿದ ಅ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ,

ಮುಂಡಳ್ಳಿ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಸಾಮಾನ್ಯ ಮಹಿಳೆಗೆ ಉಪಾಧ್ಯಕ್ಷ ಸ್ಥಾನ,

ಯಲ್ವಡಿಕವೂರ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಸಾಮಾನ್ಯ ಮಹಿಳೆಗೆ ಉಪಾಧ್ಯಕ್ಷ ಸ್ಥಾನ,

ಮುಟ್ಟಳ್ಳಿ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಹಿಂದುಳಿದ ಅ ವರ್ಗದ ಮಹಿಳೆಗೆ ಉಪಾಧ್ಯಕ್ಷ ಸ್ಥಾನ,

ಮಾರುಕೇರಿ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ,

ಕೋಣಾರ ಗ್ರಾಮ ಪಂಚಾಯತ್ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ,

ಶಿರಾಲಿ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಅನುಸೂಚಿತ ಜಾತಿ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ,

ಹೆಬಳೆ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಹಿಂದುಳಿದ ಅ ವರ್ಗದ ಮಹಿಳೆಗೆ ಉಪಾಧ್ಯಕ್ಷ ಸ್ಥಾನ,

ಹಾಡುವಳ್ಳಿ ಗ್ರಾಮ ಪಂಚಾಯಿತಿ ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ,

ಬೆಳಕೆ ಗ್ರಾಮ ಪಂಚಾಯಿತಿ ಅನುಸೂಚಿತ ಜಾತಿ ಮಹಿಳೆಗೆ ಅಧ್ಯಕ್ಷ ಸ್ಥಾನ, ಹಿಂದುಳಿದ ಅ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ,

ಮಾವಿನಕುರ್ವೆ ಗ್ರಾಮ ಪಂಚಾಯಿತಿ ಅನುಸೂಚಿತ ಪಂಗಡ ಮಹಿಳೆಗೆ ಅಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನವನ್ನು ಘೋಷಣೆ ಮಾಡಲಾಯಿತು.

ಓದಿ :ಎಂಇಎಸ್ ಕಿತಾಪತಿ ಬಗ್ಗೆ ಕರ್ನಾಟಕ ಪರ ವಾಸ್ತವಿಕ ಪರಿಸ್ಥಿತಿ ತಿಳಿಸಲು 'ಪುಸ್ತಕ ಬಿಡುಗಡೆ'ಗೆ ಮನವಿ!

For All Latest Updates

ABOUT THE AUTHOR

...view details