ಕರ್ನಾಟಕ

karnataka

ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಯುಪಿಯಿಂದ ಭಟ್ಕಳಕ್ಕೆ ಮರಳಿದ ವಿದ್ಯಾರ್ಥಿಗಳು - ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ

ಉತ್ತರ ಪ್ರದೇಶ ಲಖನೌನ ಖಾಸಗಿ ಇಸ್ಲಾಮಿಕ್ ಶಿಕ್ಷಣ ಸಂಸ್ಥೆಯಲ್ಲಿ ದೇಶದ ವಿವಿಧ ಭಾಗಗಳ ಸಾವಿರಾರು ಇಸ್ಲಾಂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಸಾಕಷ್ಟು ಗೊಂದಲ ಉಂಟಾಗಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಭಟ್ಕಳಕ್ಕೆ ಬಂದಿದ್ದಾರೆ.

ಯುಪಿಯಿಂದ ಭಟ್ಕಳಕ್ಕೆ ಮರಳಿದ ವಿದ್ಯಾರ್ಥಿಗಳು
Bhatkal Students Returning from UP

By

Published : Dec 20, 2019, 7:34 PM IST

ಭಟ್ಕಳ:ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಸಾಕಷ್ಟು ಗೊಂದಲ ಉಂಟಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಉತ್ತರ ಪ್ರದೇಶದ ಲಖನೌದ ನದ್ವಾ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ನಗರಕ್ಕೆ ಮರಳಿದ್ದಾರೆ.

ಯುಪಿಯಿಂದ ಭಟ್ಕಳಕ್ಕೆ ಮರಳಿದ ವಿದ್ಯಾರ್ಥಿಗಳು

ಉತ್ತರ ಪ್ರದೇಶ ಲಖನೌನ ಖಾಸಗಿ ಇಸ್ಲಾಮಿಕ್ ಶಿಕ್ಷಣ ಸಂಸ್ಥೆಯಲ್ಲಿ ದೇಶದ ವಿವಿಧ ಭಾಗಗಳ ಸಾವಿರಾರು ಇಸ್ಲಾಂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ ಭಟ್ಕಳದಿಂದಲೂ ಸಹ ನೂರಾರು ವಿದ್ಯಾರ್ಥಿಗಳು ಎರಡು ವರ್ಷ ಉನ್ನತ ಶಿಕ್ಷಣಕ್ಕಾಗಿ ನದ್ವಾ ಕಾಲೇಜಿಗೆ ದಾಖಲಾಗಿದ್ದರು. ಆದ್ರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಲಖನೌನಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಸುಮಾರು 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿರುವ ಲಖನೌ, ದಾರುಲ್, ಉಲೂಮ್, ನದ್ವಾತುಲ್ ಆವರಣದಲ್ಲಿ ಕಲ್ಲು ತೂರಾಟ ನಡೆಯುತ್ತಿದೆ. ಇದರಿಂದ ಭಟ್ಕಳ ಮೂಲದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. 2020ರ ಜನವರಿ 5ರವರೆಗೆ ಲಖನೌದ ಕಾಲೇಜಿಗೆ ರಜೆ ಘೋಷಿಸಲಾಗಿರುವ ಹಿನ್ನೆಲೆಯಲ್ಲಿ ಭಟ್ಕಳದ ನೂರಾರು ವಿದ್ಯಾರ್ಥಿಗಳು ರೈಲಿನ ಮೂಲಕ ಇಂದು ನಗರ ತಲುಪಿದ್ದಾರೆ.

ನಗರಕ್ಕೆ ಆಗಮಿಸಿದ ಮೌಲಾನಾ ಸಿದ್ದೀಕ್ ಗಜಾಲಿ ಮಾಧ್ಯಮಗಳೊಂದಿಗೆ ಮಾತನಾಡಿ, ವಿದ್ಯಾಭ್ಯಾಸದ ಹಿನ್ನೆಲೆ ದೂರದ ಉತ್ತರ ಪ್ರದೇಶದ ಲಖನೌದಲ್ಲಿ ಅಧ್ಯಯನ ಮಾಡುತ್ತಿದ್ದೇವೆ. ಆದರೆ ಸದ್ಯಕ್ಕೆ ಅಲ್ಲಿನ ಪರಿಸ್ಥಿತಿ ಆತಂಕಕಾರಿಯಾಗಿದೆ. ದೇಶದಲ್ಲಿನ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುವುದು ನಮ್ಮ ಹಕ್ಕಾಗಿದ್ದು, ಅಲ್ಲಿನ ಪರಿಸ್ಥಿತಿ ಸಹಜ ಸ್ಥಿತಿಗೆ ಮರುಕಳಿಸಿದ ಮೇಲೆ ವಾಪಸ್​ ತೆರಳಲಿದ್ದೇವೆ ಎಂದರು.

ABOUT THE AUTHOR

...view details