ಶಿರಸಿ:ಕೇಂದ್ರ ಸರ್ಕಾರ ಘೋಷಿಸಿರುವ ಆರ್ಥಿಕವಾಗಿ ಹಿಂದುಳಿದ ಮೀಸಲಾತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಿ. ಬ್ರಾಹ್ಮಣ ಸಮುದಾಯವನ್ನು ಸೇರಿಸಿದ ಕರಡನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಸೂಕ್ತ ಸೌಲಭ್ಯ ನೀಡಬೇಕು ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಾಜ್ಯಾಧ್ಯಕ್ಷ ಎಚ್.ಎಸ್.ಸಚ್ಚಿದಾನಂದಮೂರ್ತಿ ಹೇಳಿದರು.
ನಗರದ ರಾಘವೇಂದ್ರ ಮಠದಲ್ಲಿ ಮಾತನಾಡಿದ ಅವರು, 144 ಜಾತಿಗಳಿಗೆ ಶೇ.10ರಷ್ಟು ಮೀಸಲಾತಿ ನೀಡಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಕೆಲ ರಾಜ್ಯಗಳಲ್ಲಿ ಈಗಾಗಲೇ ಅನುಷ್ಠಾನಗೊಳಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದಲ್ಲಿಯೂ ಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈಗಾಗಲೆ ಅದರ ಕರಡು ತಯಾರಾಗಿದ್ದು, ಅದನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸಿದ್ಧವಾಗಿದೆ. ಹಾಗಾಗಿ ಮುಖ್ಯಮಂತ್ರಿ ಶೀಘ್ರದಲ್ಲಿ ಅದನ್ನು ಮಂಡಿಸುವ ಜತೆ ಸುಗ್ರೀವಾಜ್ಞೆ ಹೊರಡಿಸಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕು ಎಂದರು.