ಭಟ್ಕಳ: ತಾಲೂಕಿನ ಹಳೆ ಬಸ್ ನಿಲ್ದಾಣದ ಹತ್ತಿರವಿರುವ ಮೀನು ಮಾರುಕಟ್ಟೆಯನ್ನು ಬಂದ್ ಮಾಡಬೇಕೆಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪುರಸಭೆಗೆ ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ಭೀತಿ: ಮೀನು ಮಾರುಕಟ್ಟೆ ಬಂದ್ ಮಾಡುವಂತೆ ಪುರಸಭೆಗೆ ಮನವಿ - ಮೀನು ಮಾರುಕಟ್ಟೆ ಬಂದ್ ಮಾಡುವಂತೆ ಪುರಸಭೆಗೆ ಮನವಿ
ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ಭಟ್ಕಳದ ಸಾರ್ವಜನಿಕರಲ್ಲೂ ಭಯದ ವಾತಾವರಣ ಸೃಷ್ಟಿಯಾಗಿದೆ.ಈ ಹಿನ್ನೆಲೆ ತಾಲೂಕಿನ ಹಳೆ ಬಸ್ ನಿಲ್ದಾಣದ ಹತ್ತಿರವಿರುವ ಮೀನು ಮಾರುಕಟ್ಟೆಯನ್ನು ಬಂದ್ ಮಾಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಪುರಸಭೆಗೆ ಮನವಿ ಮಾಡಿದ್ದಾರೆ.
ಈಗಾಗಲೇ ದೇಶಾದಾದ್ಯಂತ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಭಟ್ಕಳದ ಸಾರ್ವಜನಿಕರಲ್ಲೂ ಭಯದ ವಾತಾವರಣ ಉಂಟಾಗಿದೆ. ಹೀಗಾಗಿ ನಗರದ ಹಳೆ ಬಸ್ ನಿಲ್ದಾಣದ ಸಮೀಪವಿರುವ ಮೀನು ಮಾರುಕಟ್ಟೆಯನ್ನು ಸ್ಥಗಿತಗೊಳಿಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಮೀನು ಮಾರುಕಟ್ಟೆಯ ವಿಡಿಯೋ ವೈರಲ್ ಮಾಡುವುದರ ಮೂಲಕ ಪುರಸಭೆಗೆ ಮನವಿ ಮಾಡಿಕೊಂಡಿದ್ದಾರೆ.
ಮುಂಜಾನೆಯಿಂದ ಮೀನು ಖರೀದಿಗೆ ಅಧಿಕ ಜನರು ಬರುತ್ತಿದ್ದು. ಅಲ್ಲದೆ ಹೊರ ದೇಶದಿಂದ ಬಂದರು ಮೀನು ತಿನ್ನುವ ಬಯಕೆಯಿಂದ ಮೀನು ಖರೀದಿಗೆ ಬರುತ್ತಿದ್ದಾರೆ.ಇದರಿಂದ ಕೊರೊನಾ ಸೋಂಕು ಹರಡುವ ಭೀತಿ ಹೆಚ್ಚಿದ್ದು ಆದಷ್ಟು ಬೇಗ ಮೀನು ಮಾರುಕಟ್ಟೆಯನ್ನು ಕೆಲದಿನಗಳ ಕಾಲ ಬಂದ್ ಮಾಡಬೇಕೆಂದು ಕೋರಿಕೊಳ್ಳುತ್ತಿದ್ದಾರೆ.