ಕಾರವಾರ:ಕುಮಟಾದ ಮನೆಯೊಂದರಲ್ಲಿ ಕಳ್ಳತನ ನಡೆಸಿದ್ದ ಇಬ್ಬರು ಅಂತರಾಜ್ಯ ಆರೋಪಿಗಳನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ.
ಕಾರವಾರ ಪೊಲೀಸರ ಭರ್ಜರಿ ಭೇಟೆ... ಇಬ್ಬರು ಅಂತರಾಜ್ಯ ಕಳ್ಳರ ಬಂಧನ - Arrest of two interstate thieves in Karwar
ಕಳೆದ ವಾರ ಕುಮಟಾದ ಗಜಾನನ ಗೌರಯ್ಯ ಎಂಬುವವರ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿದ್ದ ಇಬ್ಬರು ಅಂತರಾಜ್ಯ ಆರೋಪಿಗಳನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ.
ಕಾರವಾರದಲ್ಲಿ ಇಬ್ಬರು ಅಂತರಾಜ್ಯ ಕಳ್ಳರ ಬಂಧನ
ಗೋಪಿ ಮತ್ತು ಡೇವಿಡ್ ಫ್ರಾನ್ಸಿಸ್ ಎಂಬುವವರು ಬಂಧಿತ ಆರೋಪಿಗಳು. ಜನವರಿ 1ರಂದು ಕುಮಟಾದ ಗಜಾನನ ಗೌರಯ್ಯ ಎಂಬುವವರ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಆರೋಪಿಗಳಿಗೆ ಬಲೆ ಬೀಸಿದ್ದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಒಟ್ಟು 1,19,875 ರೂ. ಮೌಲ್ಯದ 289 ಗ್ರಾಂ. ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ.