ಕಾರವಾರ: ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಬೇಲೆಹಿತ್ತಲ್ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಗೋಕರ್ಣದಲ್ಲಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವಶಕ್ಕೆ - Arrested for attempting to sell illegal marijuana in Gokarna
ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಬೇಲೆಹಿತ್ತಲ್ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವಶಕ್ಕೆ
ಗೋಕರ್ಣದ ಬೇಲೆಹಿತ್ತಲ್ನ ದೇವು ಗೌಡ ಹಾಗೂ ಸುರೇಶ ಗೌಡ ಬಂಧಿತ ಆರೋಪಿಗಳು. ಅಕ್ರಮ ಮಾರಾಟಕ್ಕಾಗಿ ಬೇಲೆಹಿತ್ತಲ್ ಬಳಿ ರಸ್ತೆಯಲ್ಲಿ ಗಾಂಜಾ ಪ್ಯಾಕಿಂಗ್ ಮಾಡುವಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್ಐ ನವೀನ್ ನೇತೃತ್ವದ ತಂಡ ಸುಮಾರು 6 ಸಾವಿರ ಮೌಲ್ಯದ 635 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಇನ್ನು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಕುಮಟಾ ಜೆಎಂಎಫ್ಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.