ಕರ್ನಾಟಕ

karnataka

ETV Bharat / state

ಹಿಂದಿನ ಅಭ್ಯರ್ಥಿಗಳ ಕಾರ್ಯವೈಫಲ್ಯದಿಂದ ಪಕ್ಷೇತರನಾಗಿ ಸ್ಪರ್ಧೆ: ಬಸವರಾಜ ಗುರಿಕಾರ - ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷಾತೀತ ಅಭ್ಯರ್ಥಿ ಬಸವರಾಜ ಗುರಿಕಾರ

ರಾಷ್ಟ್ರೀಯ ಹಾಗೂ ಯಾವುದೇ ಪ್ರಾದೇಶಿಕ ಪಕ್ಷದಿಂದ ಸ್ಪರ್ಧಿಸಿದಲ್ಲಿ ಆ ಪಕ್ಷಗಳ ಸಿದ್ದಾಂತಗಳಿಗೆ ಬದ್ಧನಾಗಿರಬೇಕಾಗುತ್ತದೆ. ಆದರೆ, ನಮ್ಮನ್ನು ನಂಬಿ ಆಯ್ಕೆ ಮಾಡಿದವರ ಕಾರ್ಯಗಳಿಗೆ ಇದರಿಂದ ತೊಂದರೆಯಾಗುವ ಸಾಧ್ಯತೆಗಳಿವೆ.

Basavaraj Gurikar
Basavaraj Gurikar

By

Published : Oct 13, 2020, 7:18 PM IST

ಕಾರವಾರ(ಉ.ಕ):ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಪಕ್ಷಾತೀತವಾಗಿ ಸ್ಪರ್ಧೆ ಬಯಸಿದ್ದು, ಪ್ರಜ್ಞಾವಂತ ಮತದಾರರು ತಮ್ಮನ್ನು ಬೆಂಬಲಿಸುವಂತೆ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಮನವಿ ಮಾಡಿದ್ದಾರೆ.

ಮತದಾರರು ಬೆಂಬಲಿಸುವಂತೆ ಕೋರಿಕೊಂಡ ಬಸವರಾಜ ಗುರಿಕಾರ

ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿರುವ ನನಗೆ ನವನಿರ್ಮಾಣ ಚಳವಳಿ, ಗೋಕಾಕ್ ಚಳವಳಿಯಲ್ಲಿ ಭಾಗವಹಿಸಿ ಧ್ವನಿ ಎತ್ತಿದ ಅನುಭವಗಳಿದೆ. ಮಾತ್ರವಲ್ಲದೇ ಸಾಮಾಜಿಕ, ಶೈಕ್ಷಣಿಕ, ಸೈದ್ಧಾಂತಿಕವಾಗಿ ಸೇವೆ ಸಲ್ಲಿಸಿ ಇದೀಗ ಪಶ್ಚಿಮ ಪದವೀಧರ ಕ್ಷೇತ್ರದಿಂದ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದೇನೆ ಎಂದರು.

ರಾಷ್ಟ್ರೀಯ ಹಾಗೂ ಯಾವುದೇ ಪ್ರಾದೇಶಿಕ ಪಕ್ಷದಿಂದ ಸ್ಪರ್ಧಿಸಿದಲ್ಲಿ ಆ ಪಕ್ಷಗಳ ಸಿದ್ದಾಂತಗಳಿಗೆ ಬದ್ಧನಾಗಿರಬೇಕಾಗುತ್ತದೆ. ಆದರೆ, ನಮ್ಮನ್ನು ನಂಬಿ ಆಯ್ಕೆ ಮಾಡಿದವರ ಕಾರ್ಯಗಳಿಗೆ ಇದರಿಂದ ತೊಂದರೆಯಾಗುವ ಸಾಧ್ಯತೆಗಳಿದೆ. ಅಲ್ಲದೇ ಈ ಹಿಂದೆ ಆಯ್ಕೆಯಾದವರ ಕಾರ್ಯವೈಫಲ್ಯತೆ ಗುರುತಿಸಿ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದು, ಪ್ರಜ್ಞಾವಂತ ಮತದಾರರು ಬೆಂಬಲಿಸುವಂತೆ ಮನವಿ ಮಾಡಿದರು.

ABOUT THE AUTHOR

...view details