ಶಿರಸಿ: ಶಿರಸಿ ತಾಲೂಕಿನ ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ಬುಧವಾರ ಕರಡಿ ದಾಳಿಗೆ ತುತ್ತಾಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ದೇವನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಡಳ್ಳಿ ಗ್ರಾಮದ ಓಂಕಾರ ಪದ್ಮನಾಭ ಜೈನ್ (52) ಮೃತರು. ಮನೆಯ ಸಮೀಪದ ಕಾಡಿನಿಂದ ಉಪ್ಪಾಗೆ ಹಣ್ಣು ಸಂಗ್ರಹಕ್ಕೆ ತೆರಳಿದ್ದಾಗ ಘಟನೆ ನಡೆದಿದೆ.
ಕರಡಿ ದಾಳಿ: ಶಿರಸಿಯಲ್ಲಿ ರೈತ ಸಾವು - ಓಂಕಾರ ಪದ್ಮನಾಭ ಜೈನ್
ಶಿರಸಿ ತಾಲೂಕಿನ ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ಬುಧವಾರ ಕರಡಿ ದಾಳಿಗೆ ತುತ್ತಾಗಿ ರೈತರೊಬ್ಬರು ಮೃತಪಟ್ಟಿದ್ದಾರೆ.
ಶಿರಸಿ
ಕರಡಿಯಿಂದ ಪಾರಾಗಲು ರೈತ ಸಾಕಷ್ಟು ದೂರ ಓಡಿ ಬಂದಿರುವ ಸಾಧ್ಯತೆ ಇದ್ದು, ರಕ್ಷಣೆಗೆ ಮರ ಏರುವಾಗ ದಾಳಿ ಮಾಡಿದೆ. ಮರದ ಬುಡದಲ್ಲೇ ದೇಹಕ್ಕೆ ಗಂಭೀರ ಗಾಯಗೊಂಡಿದ್ದ ಓಂಕಾರ ಮೃತದೇಹವಿದ್ದು, ದೇಹದ ಮೇಲಾದ ಗಾಯ ಗಮನಿಸಿದಾಗ ಇದು ಕರಡಿ ದಾಳಿ ಎಂಬುದು ಸ್ಪಷ್ಟವಾಗಿದೆ. ರೈತನ ಚೀರಾಟ ಕೇಳಿ ಕಾಡಿನತ್ತ ಸ್ಥಳೀಯರು ಓಡಿದ್ದಾರೆ. ನಂತರ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಈಶ್ವರಪ್ಪ ಪೆದ್ದ, ಅವನಿಗೆ ಏನೂ ಗೊತ್ತಿಲ್ಲ: ಸಿದ್ದರಾಮಯ್ಯ