ಕರ್ನಾಟಕ

karnataka

ETV Bharat / state

ಪ್ರವಾಸಕ್ಕೆ ಬಂದಾಗ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರಿನ ಇಬ್ಬರು ಶವವಾಗಿ ಪತ್ತೆ - ಕಾರವಾರ ಸಮುದ್ರದಲ್ಲಿ ಕೊಚ್ಚಿಹೋದ ಬೆಂಗಳೂರಿಗರು

ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ಶವ ಪತ್ತೆಯಾಗಿದೆ.

washed away in sea
washed away in sea

By

Published : Jun 27, 2022, 8:56 AM IST

ಕಾರವಾರ: ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಪ್ರವಾಸಿಗರ ಶವ ಕುಮಟಾದ ಕಾಗಲ್ ಕಡಲತೀರದ ಬಳಿ ಪತ್ತೆಯಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕಿರಣ್, ತೇಜು ಶವ ಪತ್ತೆಯಾಗಿದೆ.‌

ಬೆಂಗಳೂರಿನಿಂದ ಒಟ್ಟು 87 ವಿದ್ಯಾರ್ಥಿಗಳು ಉತ್ತರಕನ್ನಡ ಜಿಲ್ಲೆಗೆ ಪ್ರವಾಸಕ್ಕೆ ಆಗಮಿಸಿದ್ದರು. ಕುಮಟಾದ ಕಾಗಲ್ ಬಳಿ ಉಳಿದುಕೊಂಡಿದ್ದ ಪ್ರವಾಸಿಗರು ಸಮುದ್ರದಲ್ಲಿ ಇಳಿದು ಆಟ ಆಡುತ್ತಿರುವಾಗ ಒಟ್ಟು ನಾಲ್ವರು ಕೊಚ್ಚಿ ಹೋಗಿದ್ದರು. ಅದರಲ್ಲಿ ಇಬ್ಬರು ಅಂದೇ ಶವವಾಗಿ ಪತ್ತೆಯಾಗಿದ್ದರು. ಇನ್ನಿಬ್ಬರ ಶವ ಪತ್ತೆಯಾಗಿರಲಿಲ್ಲ.

ಬಳಿಕ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಕರಾವಳಿ ಕಾವಲು ಪಡೆ ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ. ಆದರೆ, ಇಂದು ಬೆಳಗ್ಗೆ ಕಡಲ ತೀರದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಎರಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಇದನ್ನೂ ಓದಿ: ಸಾಗರ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ಅಸ್ವಸ್ಥ: ನಾಲ್ವರು ಶಿವಮೊಗ್ಗಕ್ಕೆ ರವಾನೆ)

ABOUT THE AUTHOR

...view details