ಕರ್ನಾಟಕ

karnataka

ETV Bharat / state

ಭಟ್ಕಳ ಮೂಲದ ವ್ಯಕ್ತಿ ಮಂಗಳೂರಿನಲ್ಲಿ ಕೊರೊನಾಗೆ ಬಲಿ

ಭಟ್ಕಳ ತಾಲೂಕಿನ 62 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

Bhatkal
ಭಟ್ಕಳ ಮೂಲದ ವ್ಯಕ್ತಿ ಮಂಗಳೂರಿನಲ್ಲಿ ಕೋವಿಡ್​-19 ಗೆ ಬಲಿ

By

Published : Jul 8, 2020, 12:56 PM IST

ಭಟ್ಕಳ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭಟ್ಕಳ ಮೂಲದ ವ್ಯಕ್ತಿಯೋರ್ವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ತಾಲೂಕಿನ 62 ವರ್ಷದ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು.

ಈ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details