ಭಟ್ಕಳ : ಬಾಲಕಿಯೊಬ್ಬಳನ್ನು ಪುಸಲಾಯಿಸಿ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ ಪ್ರಕರಣ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
9ನೇ ತರಗತಿ ಓದುತ್ತಿದ್ದ ಬಾಲಕಿ ಶಾಲೆಗೆ ಹೋಗುವ ಸಮಯದಲ್ಲಿ ಚಿತ್ತಾಪುರದಲ್ಲಿ ಇರುವ ತನ್ನ ಅಜ್ಜಿ ಮನೆಗೆ ಹೋಗಿ ಬಂದು ಮಾಡುತ್ತಿದ್ದವಳು. ಆಗ ಅಲ್ಲಿ ಶಿರಿಸಿಯ ರವಿ ಪಟಗಾರ ಎಂಬ ಆರೋಪಿತನು 14 ವರ್ಷದ ಬಾಲಕಿಯನ್ನು ಪುಸಲಾಯಿಸಿ ಅವಳೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಪ್ರಕರಣ ಬೆಳಕಿಗೆ ಬಂದ ನಂತರ ಆರೋಪಿ ನಾಪತ್ತೆಯಾಗಿದ್ದು, ಬಾಲಕಿಯ ತಾಯಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.