ಭಟ್ಕಳ: ತಾಲೂಕು ಪಂಚಾಯತ್ ಅಧ್ಯಕ್ಷರಾದ ಈಶ್ವರ ನಾಯ್ಕ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಟ್ಕಳ ತಾ.ಪಂ. ಅಧ್ಯಕ್ಷರಿಗೆ ಕೊರೊನಾ ದೃಢ: ಸರ್ಕಾರಿ ಆಸ್ಪತ್ರೆಗೆ ದಾಖಲು - ಭಟ್ಕಳ ಕೊರೊನಾ ಅಪ್ ಡೇಟ್ ನ್ಯೂಸ್
ಭಟ್ಕಳ ತಾಲೂಕು ಪಂಚಾಯತ್ ಅಧ್ಯಕ್ಷ ಈಶ್ವರ ನಾಯ್ಕ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಂಪರ್ಕಕ್ಕೆ ಬಂದವರು ಸರ್ಕಾರಿ ಆಸ್ಪತ್ರೆ ಅಥವಾ ಆರೋಗ್ಯ ಘಟಕಕ್ಕೆ ಭೇಟಿ ನೀಡಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಈಶ್ವರ ನಾಯ್ಕ
ಜ್ವರದಿಂದ ಬಳಲುತ್ತಿದ್ದ ಅವರು ಭಟ್ಕಳಕ್ಕೆ ಚಿಕಿತ್ಸೆಗೆಂದು ಬಂದಾಗ ಕೊರೊನಾ ಸೋಂಕು ತಗುಲಿರುವುದು ಕಂಡುಬಂದಿದೆ. ಭಟ್ಕಳದಲ್ಲಿ 46 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಕೋವಿಡ್ ತಪಾಸಣೆ ನಿರಂತರವಾಗಿ ನಡೆಯುತ್ತಿದೆ.
ಇನ್ನು ನನ್ನ ಸಂಪರ್ಕಕ್ಕೆ ಬಂದವರು ಸರ್ಕಾರಿ ಆಸ್ಪತ್ರೆ ಅಥವಾ ಪಕ್ಕದ ಯಾವುದೇ ಆರೋಗ್ಯ ಘಟಕಕ್ಕೆ ಭೇಟಿ ನೀಡಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈಶ್ವರ ನಾಯ್ಕ ತಿಳಿಸಿದ್ದಾರೆ.