ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಅವರನ್ನು ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರರಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಭೀಮಣ್ಣ ನಾಯ್ಕ ನೇಮಕ - ಭೀಮಣ್ಣ ನಾಯ್ಕ
ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರರಾಗಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಭೀಮಣ್ಣ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.
ಕಳೆದ 10 ವರ್ಷಗಳಿಂದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಭೀಮಣ್ಣ ನಾಯ್ಕ ಅವರಿಗೆ, ತಮ್ಮ ಅನುಭವ, ತಿಳಿವಳಿಕೆ ಬಳಸಿಕೊಂಡು ವಿಷಯಗಳನ್ನು ಸಮರ್ಥವಾಗಿ ಮಂಡಿಸಿ ಎಂದು ಡಿ.ಕೆ.ಶಿವಕುಮಾರ ಸೆ.19 ರಂದು ಆದೇಶ ಪತ್ರ ಹೊರಡಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ದೃಶ್ಯ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳು ಮಹತ್ವದ ವಿಷಯಗಳ ಬಗ್ಗೆ ಚರ್ಚೆಯ ನೇತೃತ್ವ ವಹಿಸುತ್ತಿವೆ. ಆದ ಕಾರಣ ನಮ್ಮ ದೃಷ್ಟಿಕೋನ, ವಿಚಾರಗಳು ಮಾಧ್ಯಮಗಳಲ್ಲಿ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಿದ್ದು, ತಮ್ಮ ಅನುಭವ ಗಮನಿಸಿ 'ಕೆಪಿಸಿಸಿ ವಕ್ತಾರ' ರನ್ನಾಗಿ ಮಾಡಲಾಗುತ್ತಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೇ ತಕ್ಷಣವೇ ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.