ಕರ್ನಾಟಕ

karnataka

ETV Bharat / state

ಬೈಕ್​ಗೆ ನಾಯಿ ಅಡ್ಡ ಬಂದು ಅಪಘಾತ: ಸವಾರ ಸಾವು, ಇನ್ನೋರ್ವ ಗಂಭೀರ

ವೇಗವಾಗಿ ಚಲಿಸುತ್ತಿದ್ದ ಬೈಕ್​ಗೆ ನಾಯಿ ಅಡ್ಡ ಬಂದ ಪರಿಣಾಮ‌ ಬೈಕ್​ ಪಲ್ಟಿಯಾಗಿ ಸವಾರ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕುಮಟಾ ತಾಲೂಕಿನ ಬಾಡದ ಸಿಂಡಿಕೇಟ್ ಬ್ಯಾಂಕ್ ಬಳಿ ನಡೆದಿದೆ.

ಬೈಕ್​ಗೆ ಅಪಘಾತ ಸವಾರ ಸಾವು

By

Published : May 28, 2019, 4:44 AM IST

ಕಾರವಾರ:ವೇಗವಾಗಿ ಚಲಿಸುತ್ತಿದ್ದ ಬೈಕ್​ಗೆ ನಾಯಿ ಅಡ್ಡ ಬಂದ ಪರಿಣಾಮ‌ ಬೈಕ್​ ಪಲ್ಟಿಯಾಗಿ ಸವಾರ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕುಮಟಾ ತಾಲೂಕಿನ ಬಾಡದ ಸಿಂಡಿಕೇಟ್ ಬ್ಯಾಂಕ್ ಬಳಿ ನಡೆದಿದೆ.

ಮೃತನನ್ನು ಕುಮಟಾದ ಹೊಲನಗದ್ದೆ ನಿವಾಸಿ ಅರವಿಂದ ರಮಾತಾಂತ ಹರಿಕಂತ್ರ (26) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಸಿದ್ದಾಪುರದ ಮಂಜುನಾಥ ಎಂದು ಗುರುತಿಸಲಾಗಿದ್ದು, ಮಂಜುನಾಥ ಗಂಭೀರ ಗಾಯಗೊಂಡಿದ್ದಾನೆ.

ಬೈಕ್ ಅಪಘಾತದಲ್ಲಿ ಸವಾರ ಸಾವು
ಕುಮಟಾ ಪಟ್ಟಣದಿಂದ ಅಘನಾಶಿನಿಗೆ ತೆರಳುವಾಗ ಘಟನೆ ನಡೆದಿದೆ. ತಕ್ಷಣ ಸ್ಥಳೀಯರು ಎತ್ತಿ ಉಪಚರಿಸಿ 108ಕ್ಕೆ ಕರೆ ಮಾಡಿದ್ದಾರೆ. ಆದರೆ ಆಂಬುಲೆನ್ಸ್ ಬರುವರೆಗೆ ಇಬ್ಬರ ಸ್ಥಿತಿ ಗಂಭೀರ ಮಟ್ಟಕ್ಕೆ ತಲುಪಿದ್ದು, ಕುಮಟಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಆ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದ ಪರಿಣಾಮ ಮಣಿಪಾಲಕ್ಕೆ ಕರೆದುಕೊಂಡು ಹೋಗುವಾಗ ಭಟ್ಕಳದ ಬಳಿ ಸವಾರ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details