ಕರ್ನಾಟಕ

karnataka

By

Published : Feb 20, 2020, 5:28 AM IST

ETV Bharat / state

ಕಾರು- ಬೈಕ್ ನಡುವೆ ಮುಖಾಮುಖಿ ಡಿಕ್ಕಿ... ಬೈಕ್​ ಸವಾರ ಸಾವು

ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

bike-car-accident-dot-bike-driver-died
ಕಾರು ಬೈಕ್ ಮುಖಾಮುಖಿ...ಬೈಕ್​ ಸವಾರ ಸಾವು

ಕಾರವಾರ: ನಗರದ ಖಾಸಗಿ ಕಾಲೇಜು ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಕೋಡಿಬಾಗ ದುರ್ಗಾದೇವಿ ದೇವಸ್ಥಾನದ ಸಮೀಪದ ನಿವಾಸಿ ವಸಂತ ಪೊಂಡೇಕರ (65) ಮೃತ ಯುವಕ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸದಾಶಿವಗಡದಿಂದ ಕಾರವಾರ ಕಡೆಗೆ ಬರುತ್ತಿದ್ದ ವೇಳೆ ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭಿರ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಸಂಚಾರ ಠಾಣೆಯ ಪಿಎಸ್‌ಐ ಎನ್. ಡಿ. ಜಕ್ಕಣ್ಣವರ ಸ್ಥಳ ಪರೀಶಿಲನೆ ನಡೆಸಿ ಕಾರು ಚಾಲಕನ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details