ಭಟ್ಕಳ (ಉ.ಕ): ಇಲ್ಲಿನ ತಾಲೂಕು ಪಂಚಾಯಿತಿ ಮುಂಭಾಗದ ರಾಷ್ಟ್ರಿಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಲಾರಿ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸವಾರನ ತಲೆಯ ಮೇಲೆ ಲಾರಿ ಹರಿದ ಪರಿಣಾಮ ಜಾಮಿಯಾಬಾದ್ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ ಸಾವನ್ನಪ್ಪಿದ್ದಾನೆ.
ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಲೆ ಮೇಲೆ ಲಾರಿ ಹರಿದು ಸವಾರ ಸಾವು - ಲಾರಿ ಅಪಘಾತ
ರಸ್ತೆಯಲ್ಲಿ ಬಿದ್ದ ಬೈಕ್ ಸವಾರನ ತಲೆ ಮೇಲೆ ಲಾರಿಯ ಚಕ್ರ ಹರಿದಿದ್ದರಿಂದ ಧರಿಸಿದ್ದ ಹೆಲ್ಮೆಟ್ ಪುಡಿಯಾಗಿದೆ. ಅಪಘಾತದ ತೀವ್ರತೆಗೆ ವ್ಯಕ್ತಿಯ ಗುರುತು ಪತ್ತೆ ಮಾಡುವುದು ಸಹ ಕಷ್ಟವಾಗಿತ್ತು.
ತಲೆ ಮೇಲೆ ಲಾರಿ ಹರಿದು ಚಾಲಕ ಸಾವು
ರಸ್ತೆಯ ಒಂದು ಭಾಗದಿಂದ ಇನ್ನೊಂದು ಕಡೆ ತಿರುಗುವ ಸಂದರ್ಭದಲ್ಲಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ವೇಳೆ ರಸ್ತೆಗೆ ಬಿದ್ದ ಸವಾರನ ತಲೆ ಮೇಲೆ ಲಾರಿ ಹರಿದಿದೆ. ಸವಾರ ಹೆಲ್ಮೆಟ್ ಧರಿಸಿದ್ದರೂ ತಲೆ ಮೇಲೆ ಲಾರಿಯ ಚಕ್ರ ಹರಿದಿದ್ದರಿಂದ ಹೆಲ್ಮೆಟ್ ಪುಡಿಯಾಗಿದೆ. ಅಪಘಾತದ ತೀವ್ರತೆಗೆ ವ್ಯಕ್ತಿಯ ಗುರುತು ಪತ್ತೆ ಮಾಡುವುದು ಸಹ ಕಷ್ಟವಾಗಿತ್ತು. ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ಭೀಕರ ಅಪಘಾತ: ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧ ವಿಧಿವಶ