ಕಾರವಾರ(ಉತ್ತರ ಕನ್ನಡ): ಬಿಜೆಪಿಯವರಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಭಯ ಇರುವುದರಿಂದ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಯಾವುದಕ್ಕೂ ಹೆದರುವವರಲ್ಲ. ಕಾಂಗ್ರೆಸ್ ಪಕ್ಷದ ಎಲ್ಲರೂ ಅವರ ಪರವಾಗಿದ್ದಾರೆ ಎಂದು ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಭಯವಿದೆ. ಇದೇ ಕಾರಣಕ್ಕೆ ಅನಾವಶ್ಯಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಇದರಿಂದ ಏನು ಪ್ರಯೋಜನವಿಲ್ಲ. ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ಸುಲಭವಾಗಿ ಗೆಲ್ಲಬಹುದು ಎಂದುಕೊಂಡಿದ್ದಾರೆ. ಆದ್ರೆ, ಇದು ಸಾಧ್ಯವಿಲ್ಲ. ಇಂತಹ ನೂರು ಪಕ್ಷದವರು ಟಾರ್ಗೆಟ್ ಮಾಡಿದರೂ ಅವರನ್ನು ಎದುರಿಸುವ ಸಾಮರ್ಥ್ಯ ಸಿದ್ದರಾಮಯ್ಯನವರಿಗೆ ಇದೆ ಎಂದರು.